TSK

TSK · ಙ್ಞಾನೋಕ್ತಿಗಳು 10:6

Treasury of Scripture Knowledge references in ಕನ್ನಡ IRV.

Back to passage

ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.

ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.

ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.

ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.

ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,