TSK

TSK · ಙ್ಞಾನೋಕ್ತಿಗಳು 11:17

Treasury of Scripture Knowledge references in ಕನ್ನಡ IRV.

Back to passage

ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು.

ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.

ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.

ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.

ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

‹ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.›

‹ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು”› ಅಂದನು.

ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.