TSK

TSK · ಙ್ಞಾನೋಕ್ತಿಗಳು 11:21

Treasury of Scripture Knowledge references in ಕನ್ನಡ IRV.

Back to passage

ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.

ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.

ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.

ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.