TSK

TSK · ಙ್ಞಾನೋಕ್ತಿಗಳು 13:11

Treasury of Scripture Knowledge references in ಕನ್ನಡ IRV.

Back to passage

ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.

ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.

ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.

ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.

ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.

ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.