TSK

TSK · ಙ್ಞಾನೋಕ್ತಿಗಳು 13:9

Treasury of Scripture Knowledge references in ಕನ್ನಡ IRV.

Back to passage

ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?

ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.

ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.

‹ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’›