TSK

TSK · ಙ್ಞಾನೋಕ್ತಿಗಳು 14:11

Treasury of Scripture Knowledge references in ಕನ್ನಡ IRV.

Back to passage

ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.

ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.

ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”

‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.

ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.

ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.

ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.