TSK

TSK · ಙ್ಞಾನೋಕ್ತಿಗಳು 15:27

Treasury of Scripture Knowledge references in ಕನ್ನಡ IRV.

Back to passage

ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.

ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.

ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.

ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.

ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;

ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!

ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.

‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;