TSK

TSK · ಙ್ಞಾನೋಕ್ತಿಗಳು 16:18

Treasury of Scripture Knowledge references in ಕನ್ನಡ IRV.

Back to passage

ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.

ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

¶ “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.

¶ “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.

ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

‹ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.›

ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.