TSK

TSK · ಙ್ಞಾನೋಕ್ತಿಗಳು 17:14

Treasury of Scripture Knowledge references in ಕನ್ನಡ IRV.

Back to passage

¶ ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.

¶ ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.

ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.

ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.

¶ ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.

ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.

ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.

ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.

ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.

ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.

¶ ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.