TSK

TSK · ಙ್ಞಾನೋಕ್ತಿಗಳು 19:23

Treasury of Scripture Knowledge references in ಕನ್ನಡ IRV.

Back to passage

ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.

ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.

ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.

ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

‹ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.›

¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.

ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.