ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
TSK
TSK · ಙ್ಞಾನೋಕ್ತಿಗಳು 2:4
Treasury of Scripture Knowledge references in ಕನ್ನಡ IRV.
ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.
ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.
ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›
ಯೇಸು ಅವನಿಗೆ, ‹“ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
‹ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.›