TSK

TSK · ಙ್ಞಾನೋಕ್ತಿಗಳು 21:24

Treasury of Scripture Knowledge references in ಕನ್ನಡ IRV.

Back to passage

¶ ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.

“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?

ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.

¶ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.