TSK

TSK · ಙ್ಞಾನೋಕ್ತಿಗಳು 21:31

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.

ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.

ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.

ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.