TSK

TSK · ಙ್ಞಾನೋಕ್ತಿಗಳು 23:5

Treasury of Scripture Knowledge references in ಕನ್ನಡ IRV.

Back to passage

ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು.

ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.

ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?

¶ ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.

ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.

ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.