TSK

TSK · ಙ್ಞಾನೋಕ್ತಿಗಳು 24:6

Treasury of Scripture Knowledge references in ಕನ್ನಡ IRV.

Back to passage

ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.

ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.

ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.