TSK

TSK · ಙ್ಞಾನೋಕ್ತಿಗಳು 25:18

Treasury of Scripture Knowledge references in ಕನ್ನಡ IRV.

Back to passage

ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.

ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.

ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ

ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.

ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.