TSK

TSK · ಙ್ಞಾನೋಕ್ತಿಗಳು 25:6

Treasury of Scripture Knowledge references in ಕನ್ನಡ IRV.

Back to passage

ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.

ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.

ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.

ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.

ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.