TSK

TSK · ಙ್ಞಾನೋಕ್ತಿಗಳು 26:1

Treasury of Scripture Knowledge references in ಕನ್ನಡ IRV.

Back to passage

ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.

ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.

ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.

ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.

ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.

ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.