TSK

TSK · ಙ್ಞಾನೋಕ್ತಿಗಳು 27:3

Treasury of Scripture Knowledge references in ಕನ್ನಡ IRV.

Back to passage

ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.

ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.

ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.

ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.