ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
TSK
TSK · ಙ್ಞಾನೋಕ್ತಿಗಳು 28:17
Treasury of Scripture Knowledge references in ಕನ್ನಡ IRV.
ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.
ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.
ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.