TSK

TSK · ಙ್ಞಾನೋಕ್ತಿಗಳು 3:19

Treasury of Scripture Knowledge references in ಕನ್ನಡ IRV.

Back to passage

ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.

ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,

ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.