ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.
TSK
TSK · ಙ್ಞಾನೋಕ್ತಿಗಳು 3:2
Treasury of Scripture Knowledge references in ಕನ್ನಡ IRV.
ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.