TSK

TSK · ಙ್ಞಾನೋಕ್ತಿಗಳು 31:22

Treasury of Scripture Knowledge references in ಕನ್ನಡ IRV.

Back to passage

ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

¶ ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ.

ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.