TSK

TSK · ಙ್ಞಾನೋಕ್ತಿಗಳು 4:15

Treasury of Scripture Knowledge references in ಕನ್ನಡ IRV.

Back to passage

ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.

ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.

ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.

ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.