TSK

TSK · ಙ್ಞಾನೋಕ್ತಿಗಳು 4:2

Treasury of Scripture Knowledge references in ಕನ್ನಡ IRV.

Back to passage

ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,

ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.

ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,

ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.

ಅದಕ್ಕೆ ಯೇಸು ‹“ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.›

ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.