TSK

TSK · ಙ್ಞಾನೋಕ್ತಿಗಳು 5:16

Treasury of Scripture Knowledge references in ಕನ್ನಡ IRV.

Back to passage

ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.

ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.

ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.

ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.