TSK

TSK · ಙ್ಞಾನೋಕ್ತಿಗಳು 8:11

Treasury of Scripture Knowledge references in ಕನ್ನಡ IRV.

Back to passage

ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.

ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.

‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›