TSK

TSK · ಙ್ಞಾನೋಕ್ತಿಗಳು 8:18

Treasury of Scripture Knowledge references in ಕನ್ನಡ IRV.

Back to passage

ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.

ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.

ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.

¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›

‹ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ”› ಎಂದು ಉತ್ತರಕೊಟ್ಟನು.

‹ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.›

ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.