ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.
TSK
TSK · ಕೀರ್ತನೆಗಳು 21:8
Treasury of Scripture Knowledge references in ಕನ್ನಡ IRV.
¶ ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.
ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
‹ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.›
ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.