TSK

TSK · ಕೀರ್ತನೆಗಳು 69:21

Treasury of Scripture Knowledge references in ಕನ್ನಡ IRV.

Back to passage

¶ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.

ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.

ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.

¶ ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.

¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.