TSK

TSK · ಕೀರ್ತನೆಗಳು 71:21

Treasury of Scripture Knowledge references in ಕನ್ನಡ IRV.

Back to passage

ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.

ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.

ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”

¶ ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.

¶ ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.