TSK

TSK · ಪ್ರಕಟನೆ 13:3

Treasury of Scripture Knowledge references in ಕನ್ನಡ IRV.

Back to passage

¶ ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.

ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.

ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.

ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.