TSK

TSK · ರೋಮಾಪುರದವರಿಗೆ 1:29

Treasury of Scripture Knowledge references in ಕನ್ನಡ IRV.

Back to passage

ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.

ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.

ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.