TSK

TSK · ರೋಮಾಪುರದವರಿಗೆ 10:7

Treasury of Scripture Knowledge references in ಕನ್ನಡ IRV.

Back to passage

ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

‹ಸದಾ ಜೀವಿಸುವವನೂ ಆಗಿದ್ದೇನೆ.›‹ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.›‹ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.›