TSK

TSK · ರೋಮಾಪುರದವರಿಗೆ 11:18

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

‹ಇದಲ್ಲದೆ›‹ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ›‹ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.›

ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.