TSK

TSK · ರೋಮಾಪುರದವರಿಗೆ 16:13

Treasury of Scripture Knowledge references in ಕನ್ನಡ IRV.

Back to passage

ಶಿಷ್ಯರ ಕಡೆಗೆ ಕೈ ಚಾಚಿ, ‹“ಇಗೋ ನನ್ನ ತಾಯಿ, ನನ್ನ ಸಹೋದರರು.›

‹ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ”› ಅಂದನು.

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.

ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.