TSK

TSK · ರೋಮಾಪುರದವರಿಗೆ 16:3

Treasury of Scripture Knowledge references in ಕನ್ನಡ IRV.

Back to passage

ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.

ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.