TSK

TSK · ರೋಮಾಪುರದವರಿಗೆ 4:1

Treasury of Scripture Knowledge references in ಕನ್ನಡ IRV.

Back to passage

ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.

‹‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.›

ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.

¶ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.

¶ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?