TSK

TSK · ರೋಮಾಪುರದವರಿಗೆ 4:8

Treasury of Scripture Knowledge references in ಕನ್ನಡ IRV.

Back to passage

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.