ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
TSK
TSK · ರೋಮಾಪುರದವರಿಗೆ 7:21
Treasury of Scripture Knowledge references in ಕನ್ನಡ IRV.
ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
ಅದಕ್ಕೆ ಯೇಸು, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.›
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.