TSK

TSK · ರೋಮಾಪುರದವರಿಗೆ 7:25

Treasury of Scripture Knowledge references in ಕನ್ನಡ IRV.

Back to passage

ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”

ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.

ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.