TSK

TSK · ರೋಮಾಪುರದವರಿಗೆ 7:8

Treasury of Scripture Knowledge references in ಕನ್ನಡ IRV.

Back to passage

‹ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.›

ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.

ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.

ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.