TSK

TSK · ರೂತಳು 1:14

Treasury of Scripture Knowledge references in ಕನ್ನಡ IRV.

Back to passage

¶ ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.

ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.

¶ ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

¶ ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.

ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.