TSK

TSK · ದಾನಿಯೇಲನು 11:21

Treasury of Scripture Knowledge references in Kannada KJV.

Back to passage

ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.

ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.

ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.

ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.

ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.