TSK

TSK · ಆದಿಕಾಂಡ 21:30

Treasury of Scripture Knowledge references in Kannada KJV.

Back to passage

ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.

ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.

ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.