TSK

TSK · ಆದಿಕಾಂಡ 21:4

Treasury of Scripture Knowledge references in Kannada KJV.

Back to passage

ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.

ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.

ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.

ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.