TSK

TSK · ಯೋಹಾನನು 21:19

Treasury of Scripture Knowledge references in Kannada KJV.

Back to passage

ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.

ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.

ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.

ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.