TSK

TSK · ಮತ್ತಾಯನು 4:21

Treasury of Scripture Knowledge references in Kannada KJV.

Back to passage

ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,

ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.

ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.

ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.

ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.