TSK

TSK · ಙ್ಞಾನೋಕ್ತಿಗಳು 1:11

Treasury of Scripture Knowledge references in Kannada KJV.

Back to passage

ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;

ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.

ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.

ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.

ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;

ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.

ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.

ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.