TSK

TSK · ಙ್ಞಾನೋಕ್ತಿಗಳು 11:23

Treasury of Scripture Knowledge references in Kannada KJV.

Back to passage

ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.

ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.

ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.

ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.

ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.

ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.